ಬೆಂಗಳೂರು: ಹಿಜಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
https://x.com/BasanagoudaBJP/status/1738454045067817302?s=20
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದು ಪ್ರತಿಪಾದಿಸಿದ್ದಾರೆ
ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ. ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳು ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ. ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.