ನವದೆಹಲಿ: ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ನಾನು 40 ವರ್ಷಗಳ ಕಾಲ ವಾರದಲ್ಲಿ ಆರು ದಿನ 85 ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ನನ್ನ ಶ್ರಮ ವ್ಯರ್ಥ ಆಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಮಾಧ್ಯಮದ ಜೊತೆ ಇನ್ಫೋಸಿಸ್ (Infosys) ಕಂಪನಿ ಸ್ಥಾಪನೆ ಮಾಡುವ ಸಂದರ್ಭದಲ್ಲಿನ ಅನುಭವ ಹಂಚಿಕೊಂಡ ಅವರು,
ಬೆಳಗ್ಗೆ 6:20ಕ್ಕೆ ಕಚೇರಿಯಲ್ಲಿದ್ದರೆ ರಾತ್ರಿ 8:30ಕ್ಕೆ ಮನೆಗೆ ಹೊರಡುತ್ತಿದ್ದೆ ಎಂದು ಹೇಳುವ ಮೂಲಕ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಪ್ರತಿಯೊಂದು ರಾಷ್ಟ್ರವೂ ಕಠಿಣ ಪರಿಶ್ರಮದ ಮೂಲಕ ಮಾಡಿದೆ ಎಂದು ನನಗೆ ತಿಳಿದಿದೆ. ಬಡತನದಿಂದ ಪಾರಾಗುವ ಏಕೈಕ ಮಾರ್ಗವೆಂದರೆ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕು ಎಂದು ನನ್ನ ಪೋಷಕರು ನನಗೆ ಕಲಿಸಿಕೊಟ್ಟಿದ್ದರು ಎಂದು ತಿಳಿಸಿದರು.
ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ
ಅಕ್ಟೋಬರ್ನಲ್ಲಿ ಇನ್ಫೋಸಿಸ್ನ ಮಾಜಿ ಸಿಎಫ್ಒ ಮೋಹನ್ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿ, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದ್ದರು.