ಬೆಂಗಳೂರು:- ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ನೂತನ ವರ್ಷಕ್ಕೆ ಕಾಲಿಡುತ್ತಿದ್ದಂತೆ BMTCಗೆ ಹರಿದು ಬಂತು ಕೋಟಿ-ಕೋಟಿ ಆದಾಯ!?
ಈ ಸಂಬಂಧ ಮಾತನಾಡಿದ ಅವರು , ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ಮೇಲೆ ಉರಿದುರಿದು ಬೀಳುತ್ತಿದ್ದಾರೆ. ಈ ಮಧ್ಯೆ ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ ಪಿತೂರಿಯ “ಟೂಲ್ ಕಿಟ್“ ರೂಪಿಸಿದೆ ಎಂದರು.
ಹಿಂದೆ ಬಿಜೆಪಿ vs ಕೆಜೆಪಿ ಬಡಿದಾಟವಿತ್ತು. ಈಗ ಬಿಜೆಪಿಯಲ್ಲಿ VJP vs YJP vs AJP ಬಡಿದಾಟ ನಡೆಯುತ್ತಿದೆ, ಈ ಬಡಿದಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕ ಶುರು ಮಾಡಿಕೊಂಡಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ, ಕಾಫಿ, ಟಿ, ಬಿಸ್ಕೆಟ್ ಗಳ ಆತಿಥ್ಯವನ್ನೂ ನೀಡುತ್ತೇನೆ ಎಂದು ಕಿಡಿಕಾರಿದ್ದಾರೆ.