ನವದೆಹಲಿ:- ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋಲನ್ನಪ್ಪಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ. ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು