ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ನಟ ಶಿವರಾಜ್ಕುಮಾರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ವೈದ್ಯರು ಮಾಹಿತಿ ನೀಡಿದ್ದರು. ಇದೀಗ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಒಳ್ಳೆಯ ಸುದ್ದಿ ನೀಡಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿದ್ದ ಶಿವಣ್ಣ, ಶಸ್ತ್ರಚಿಕಿತ್ಸೆಯ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿಡಿಯೋ ಮಾಡಿ ಹಂಚಿಕೊಂಡಿದ್ದು ತಮ್ಮ ಆರೋಗ್ಯದ ಬಗ್ಗೆ ಸ್ವತಃ ಮಾಹಿತಿ ನೀಡಿದ್ದಾರೆ.
ಗೀತಾ ಶಿವರಾಜ್ಕುಮಾರ್ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ ಮಾಡಿದ ಪ್ರಾರ್ಥನೆಯಿಂದ ಶಿವರಾಜ್ಕುಮಾರ್ ಎಲ್ಲಾ ರಿಪೋರ್ಟ್ ನೆಗೆಟಿವ್ ಬಂತು. ಅವರೀಗ ಕ್ಯಾನ್ಸರ್ ಫ್ರೀ ಅಂತ ವೈದ್ಯರು ಅಫಿಷಿಯಲಿ ಹೇಳಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ. ಇದನ್ನೂ ನಾನು ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು
ಬಳಿಕ ಶಿವಣ್ಣ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಭಯ ಆಗುತ್ತೆ ಮಾತನಾಡಬೇಕಾದರೆ, ಎಲ್ಲಿ ಎಮೋಷನಲ್ ಆಗಿ ಬಿಡ್ತೀನಿ ಅಂತ. ಇಲ್ಲಿಂದ ಹೋಗುವಾಗ ಎಮೋಷನಲ್ ಆಗಿದ್ದೇ, ಭಯ ಅನ್ನೋದು ಇದ್ದೇ ಇರುತ್ತದೆ. ಆ ಭಯ ಕಮ್ಮಿ ಮಾಡೋಕೆ ಎಂದೇ ಅಭಿಮಾನಿ ದೇವರುಗಳಿದ್ದಾರೆ. ವೈದ್ಯರು ನನ್ನ ನೋಡಿಕೊಂಡ ರೀತಿಯಿಂದ ಇನ್ನಷ್ಟು ಧೈರ್ಯ ಬಂತು. ’45’ ಚಿತ್ರದ ಶೂಟಿಂಗ್ ಮಾಡುವಾಗ ಕಿಮೋ ಥೆರಾಫಿಯಲ್ಲಿ ಕೆಲಸ ಮಾಡಿದ್ದೀನಿ. ಕ್ಲೈಮ್ಯಾಕ್ಸ್ ಫೈಟ್ ಎಲ್ಲಾ ಮಾಡಿದ್ದೇನೆ. ಅಮೆರಿಕಗೆ ಚಿಕಿತ್ಸೆಗೆ ಹೊರಡುವ ಡೇಟ್ ಹತ್ತಿರ ಬಂದಾಗ ಸ್ವಲ್ಪ ಟೆನ್ಷನ್ ಜಾಸ್ತಿ ಆಯಿತು. ನನ್ನ ಪತ್ರಿ ಮತ್ತು ಮಗಳು ನಿವಿ ನನ್ನ ಜೊತೆ ಬೆಂಬಲವಾಗಿ ನಿಂತಿದ್ದಾರೆ.
ನನ್ನ ಚಿಕಿತ್ಸೆ ಮಾಡಿದ ವೈದ್ಯ ಮನೋಹರ್ ಅವರು ಮಗುವಿನಂತೆ ನನ್ನ ನೋಡಿಕೊಂಡರು. ಯೂರಿನರಿ ಬ್ಲಾಡ್ ತೆಗೆದು ಹೊಸದು ಬ್ಲಾಡ್ ಹಾಕಿದ್ದಾರೆ. ಯಾರು ಗಾಬರಿ ಆಗಬೇಡಿ ನಾನು ಆರಾಮ ಆಗಿದ್ದೇನೆ. ಐ ವಿಲ್ ಬಿ ಬ್ಯಾಕ್, ಡಬಲ್ ಪವರ್ನೊಂದಿಗೆ ಬರುತ್ತೇನೆ. ಎಲ್ಲಾ ನನ್ನ ಅಭಿಮಾನಿ ದೇವರುಗಳಿಗೂ ಧನ್ಯವಾದಗಳು ಎಂದು ಶಿವಣ್ಭ ಮಾತನಾಡಿದ್ದಾರೆ.