ಬೆಂಗಳೂರು:- 30 ದಿನಗಳ ಬಳಿಕ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತೇನೆ ಎಂದು ಶಿವಣ್ಣ ಹೇಳಿದ್ದಾರೆ.
ಬೆಳ್ಳುಳ್ಳಿ ದರ ದುಬಾರಿ: ಕೆಜಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!? ಅಬ್ಬಬ್ಬಾ ಹಿಂಗಾದ್ರೆ ಹೆಂಗೆ!
ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದರು.
ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ. ಏರ್ಪೋಟ್ ಇಳಿದು ಆಸ್ಪತ್ರೆ ಮುಂದೆ ಹೋಗಬೇಕಿದ್ದಾಗಲೇ ಧೈರ್ಯ ಬಂತು. ಆಪರೇಷನ್ ಮುಗಿದ ಮೇಲೆ ಬಂದು ಹೇಳಿದ ಮೇಲೆ ಎಲ್ಲವೂ ಆಗಿದೆ ಅಂತ ಗೊತ್ತಾಯ್ತು ಎಂದರು.
ಫ್ಲೈಟ್ನಲ್ಲಿ 20 ಗಂಟೆಯಾಯಿತು. ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ವಾಕ್ ಶುರು ಮಾಡಿದೆ. ಆ ಎನರ್ಜಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿ ಅವರು ಧೈರ್ಯ ತುಂಬಿದರು. ಗೀತನ ಬಗ್ಗೆ ಮಾತಾಡಲ್ಲ. ಗೀತಾ ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು.