ಬೆಳಗಾವಿ : ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅದಲ್ಲದೇ ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಯಾರಿಗೂ ವಂಚನೆ ಮಾಡುವುದಿಲ್ಲ ಎಂದು ಇದೇ ವೇಳೆ ಯತ್ನಾಳ್ ಹೇಳಿದರು.
ಮಾತನಾಡಿದ ಅವರು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಕರ್ನಾಟಕದ, ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತ ನೋಡದೆ, ದೇಶ ಉಳಿಸುವುದಕ್ಕಾಗಿ ಎಲ್ಲರೂ ಮತ ಹಾಕಿ ಎಂದು ಹೇಳಿದರು.
ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
ಈ ಚುನಾವಣೆ ಮುಂದಿನ ಐದು ವರ್ಷದ ಭಾರತದ ಭವಿಷ್ಯವನ್ನು ನಿರ್ಮಾಣ ಮಾಡುವಂತಹ ಚುನಾವಣೆ. ನನ್ನ ದೇಶ, ನನ್ನ ಸನಾತನ ಧರ್ಮ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ. ಹತ್ತು ವರ್ಷ ನರೇಂದ್ರ ಮೋದಿ ಅವರು ಏನು ಮಾಡಿದ್ದಾರೆ ಎಂದು ಕಾಂಗ್ರೆಸ್ನವರು ಕೇಳ್ತಿದ್ದಾರೆ. ಆದರೆ, 10 ವರ್ಷ ಏನು ಮಾಡಿಲ್ಲ ಎಂಬುದನ್ನು ಕಾಂಗ್ರೆಸ್ನವರು ಹೇಳಲಿ ಎಂದು ನಾನು ಕೇಳುತ್ತೇನೆ ಎಂದರು.