ಬೆಂಗಳೂರು:- ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್ಐಟಿ 1691 ಪುಟಗಳ ಚಾರ್ಜ್ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಎಸ್ಐಟಿ ಚಾರ್ಜ್ಶೀಟ್ನಲ್ಲಿ ಪ್ರಜ್ವಲ್ ರೇವಣ್ಣ ಕಾಮಕಾಂಡ ಬಯಲಾಗಿದೆ.
ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಪ್ರಜ್ವಲ್ ರೇವಣ ಅತ್ಯಾಚಾರ ಎಸಗಿರುವುದು ಎಸ್ಐಟಿ ತನಿಖೆಯಲ್ಲಿ ಸಾಬೀತಾಗಿದೆ.