ದಾವಣಗೆರೆ: ನಾನು ನಿದ್ದೆ ಬಿಟ್ಟು ಲೋಕಸಭೆಯ 28 ಸೀಟ್ ಗೆಲ್ಲಿಸಲು ರಾಜ್ಯಾದ್ಯಂತ ಓಡಾಡುವೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಎಲೆಮರೆ ಕಾಯಿಯಾಗಿ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (M.P.Renukacharya) ಹೇಳಿದರು. ಬಿಎಸ್ವೈ ಪುತ್ರ ವಿಜಯೇಂದ್ರ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಆದಾಗಿನಿಂದ ರೇಣುಕಾಚಾರ್ಯ ಮತ್ತೆ ಅಕ್ಟಿವ್ ಆಗಿದ್ದಾರೆ.
ಬಿಜೆಪಿ ಲೋಕಾಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರುವ ಇವರು ಜಿಲ್ಲೆಯ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ಹಿರಿಯ ನಾಯಕ ಎಸ್.ಎ.ರವೀಂದ್ರನಾಥ್ ಅವರನ್ನು ಕುಟುಂಬಸಮೇತ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಕೆಲ ಕಾಲ ಚರ್ಚೆ ಮಾಡಿದ್ದಾರೆ.