ಹೈದರಾಬಾದ್: ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ನ ರಾವೆಲ್ಲಿ ಗ್ರಾಮದಲ್ಲಿ ತರಬೇತಿ ವಿಮಾನವೊಂದು (Trainer Aircraft) ಪತನಗೊಂಡ ಪರಿಣಾಮ ಭಾರತೀಯ ವಾಯುಪಡೆಯ (IAF) ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ.
ಹೈದರಾಬಾದ್ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ವಾಡಿಕೆಯ ತರಬೇತಿಗಾಗಿ Pilatus PC 7 Mk-II ವಿಮಾನ ಟೇಕಾಫ್ ಆಗಿತ್ತು. ಈ ವೇಳೆ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ತರಬೇತುದಾರ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಸದ್ಯ ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.
ಪಿಲಾಟಸ್ PC 7 Mk-II ವಿಮಾನವು ಒಂದೇ ಎಂಜಿನ್ ಒಳಗೊಂಡ ತರಬೇತಿ ವಿಮಾನವಾಗಿದೆ. IAF ಪೈಲಟ್ಗಳ ತರಬೇತಿಗಾಗಿ ಇದನ್ನು ಬಳಸಲಾಗುತ್ತದೆ. ಸ್ವಿಟ್ಜರ್ಲೆಂಡಿನ ಪಿಲಾಟಸ್ ಸಂಸ್ಥೆಯು ಇದನ್ನು ವಿನ್ಯಾಸಗೊಳಿಸಿ, ತಯಾರಿಸಲಿದೆ. ಈ ವಿಮಾನವನ್ನು ಏರೋಬ್ಯಾಟಿಕ್ಸ್, ಯುದ್ಧತಂತ್ರ ಮತ್ತು ರಾತ್ರಿ ಹಾರಾಟ ಸೇರಿದಂತೆ ಎಲ್ಲಾ ಮೂಲಭೂತ ತರಬೇತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಸರಿಸುಮಾರು 1,330 ಕೆ.ಜಿ ತೂಕ ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ.