ಭಾನುವಾರ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನರಾಗಿದ್ದಾರೆ. ರೈಸಿ ಅವರ ಸಾವಿನ ಬಳಿಕ ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ನಿರ್ಧರಿಸಿದೆ. ಜೂನ್ 28 ರಂದು ಇರಾನ್ನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.
ಸರ್ಕಾರ ಮತ್ತು ಸಂಸತ್ತಿನ ಮುಖ್ಯಸ್ಥರ ಸಭೆಯಲ್ಲಿ 14 ನೇ ಅಧ್ಯಕ್ಷೀಯ ಚುನಾವಣೆಯನ್ನು ಜೂನ್ 28 ರಂದು ನಡೆಸಲು ನಿರ್ಧರಿಸಲಾಯಿತು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶದಲ್ಲಿ 5 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರದಂದು ದಟ್ಟವಾದ ಮಂಜಿನಿಂದಾಗಿ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಪರ್ವತ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ, ಶೋಧ ಮತ್ತು ರಕ್ಷಣಾ ತಂಡಗಳು ಅಪಘಾತದ ಸ್ಥಳವನ್ನು ತಲುಪಲು ಸಾಕಷ್ಟು ಪ್ರಯಾಸಪಡಬೇಕಾಯಿತು. ಕೊನೆಗೆ ಸೋಮವಾರ ಮುಂಜಾನೆ ಅವಘಡ ನಡೆದ ಸ್ಥಳಕ್ಕೆ ತಲುಪಲು ಸಾಧ್ಯವಾಯಿತು. ಈ ಅಪಘಾತದಲ್ಲಿ ಇರಾನ್ನ ವಿದೇಶಾಂಗ ಸಚಿವರೂ ಕೊನೆಯುಸಿರೆಳೆದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)