ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಇದೇ ಜನವರಿ 12ರ ಒಳಗೆ ಭಾರತ ತಂಡ ಪ್ರಕಟಿಸುವ ಸಾಧ್ಯತೆಯಿದೆ.
ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ BMTC ಪಾಸ್ಗಳ ದರ ಏರಿಕೆ!
ಇದೇ ಜನವರಿ 22ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಜನವರಿ 11ರ ಒಳಗೆ ಭಾರತ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ ಐಸಿಸಿ, ಜನವರಿ 12ರ ಒಳಗೆ ತಾತ್ಕಾಲಿಕ ತಂಡಗಳನ್ನು ಪ್ರಕಟಿಸಲು ಗಡುವು ನೀಡಿದೆ. ಆ ಬಳಿಕ ಸ್ಕ್ವಾಡ್ನಲ್ಲಿ ಬದಲಾವಣೆ ತರಲು ಫೆ.13ರ ವರೆಗೆ ಅವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸ್ಕ್ವಾಡ್ಗೆ ಆಯ್ಕೆಯಾದವರು ಫಾರ್ಮ್ಗೆ ಹೊಂದಿಕೊಳ್ಳದಿದ್ದರೆ, ಅಭ್ಯಾಸದ ವೇಳೆ ಗಾಯದ ಸಮಸ್ಯೆಗೆ ತುತ್ತಾದರೆ, ಲೈನ್ ಅಪ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಳ್ಳುವುದಕ್ಕೆ ಫೆ.13ರ ವರೆಗೆ ಅವಕಾಶ ಇರಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಜ.12ರ ಒಳಗೆ ಭಾರತ ತಂಡವನ್ನು ಪ್ರಕಟಿಸಲಿದೆ.
ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತವು ಫೆಬ್ರವರಿ 20 ರಂದು ಬಾಂಗ್ಲಾದೇಶ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ ಬಾರಿ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
8 ಸ್ಪರ್ಧಾತ್ಮಕ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.