ಕಾರವಾರ: ಅನಂತ ಕುಮಾರ್ ಹೆಗಡೆಯವರ ಜತೆ ಉತ್ತಮ ಬಾಂಧವ್ಯವಿದ್ದು, ಅವರು ನನ್ನ ಸಹೋದರರಂತೆ. ಹೆಗಡೆಯವರು ಚುನಾವಣೆಗೆ ನಿಲ್ಲೋದಾದರೆ ನಾನು ಆಕಾಂಕ್ಷಿಯಲ್ಲ. ಅನಂತ ಕುಮಾರ್ ಹೆಗಡೆಯವರು ಚುನಾವಣೆಗೆ ನಿಲ್ಲದಿದ್ದರೆ ಮಾತ್ರ ನಾನು ಕೂಡಾ ಒಬ್ಬ ಚುನಾವಣಾ ಆಕಾಂಕ್ಷಿ. ದೇವೇಗೌಡರು, ಕುಮಾರಸ್ವಾಮಿ, ಪ್ರಧಾನಿ ಮೋದಿಯವರ ಅಭಿಮಾನಿಗಳು ನಮ್ಮ ಗೆಲ್ಲಿಸಿಯೇ ಗೆಲ್ಲಿಸುತ್ತಾರೆ. ಅವಕಾಶ ಸಿಕ್ಕರೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಖಂಡಿತಾ ಗೆಲ್ಲುತ್ತಾರೆ. ಜನರಿಗೆ ಬದಲಾವಣೆ ಬೇಕಿತ್ತು,
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಜೆಡಿಎಸ್ ಅಂದು ಬಿಜೆಪಿ ವಿರುದ್ಧ ಮಾತನಾಡಿದ್ದರಿಂದ ನಾನು ಕೂಡಾ ಬಿಜೆಪಿ ವಿರುದ್ಧವಿದ್ದೆ. ನನ್ನ ಕಾರ್ಯಕರ್ತರು ಬಿಜೆಪಿ ಜತೆಯಾಗಿ ನಿಲ್ಲಬೇಕೆಂದು ಹೇಳಿದ್ದರಿಂದ ಬೆಂಬಲಿಸುತ್ತಿದ್ದೇನೆ. ಪಕ್ಷದಲ್ಲಿ ವೈಯಕ್ತಿಕ ಬೇಧಭಾವ ಇರಬಹುದು. ಆದರೆ ಮೋದಿ ಮತ್ತೆ ಪ್ರಧಾನಿಯಾಗಲು ಯಾವ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಹೇಳಿದರು.