ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬಿಎಸ್ʼವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ. BSY, HDK ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ!
ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ. ಬಿ.ವೈ.ವಿಜಯೇಂದ್ರ ಯುವ ನಾಯಕ, ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ. BSY ಮೂಲೆ ಗುಂಪು ಅನ್ನೋ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದರು.