ನವದೆಹಲಿ: ಇಂದು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. 10 ವರ್ಷಗಳ ಬಳಿಕ ಚುನಾವಣೆ ಕಂಡಿರುವ ಜಮ್ಮು ಮತ್ತು ಕಾಶ್ಮೀರ ಫಲಿತಾಂಶ ಕುತೂಹಲ ಮೂಡಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಹೇಳಿದ್ದಾರೆ.
ಚುನಾವಣಾ ಮತ ಎಣಿಕೆ ನಡೆಯುತ್ತಿರುವ ಸಮಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ಸ್ಪರ್ಧಿ. ಆದರೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ದುರಾಡಳಿತ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದು ತಿಳಿಸಿದರು. ಆರಂಭದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಆದರೆ ನಂತರ ಹಿನ್ನಡೆ ಸಾಧಿಸಿದೆ.
ಬೆಳಗ್ಗೆ 11 ಗಂಟೆಯ ಟ್ರೆಂಡ್ ಪ್ರಕಾರ ಬಿಜೆಪಿ 47, ಕಾಂಗ್ರೆಸ್ 36, ಇತರರು 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹರ್ಯಾಣ ಚುನಾವಣಾ ಫಲಿತಾಂಶಕ್ಕೆ ಮೊದಲೇ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಹೆಸರು ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿದೆ.