ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಹೇಳಿದ್ದಾರೆ.
ಇನ್ನೂ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ ರೂ, ಅದರಲ್ಲಿ ರೂ.39,121 ಕೋಟಿಯನ್ನು ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ತಿಳಿಸಿದ್ದಾರೆ.