ಬೆಂಗಳೂರು: ಮುಡಾ ಮತ್ತು ವಾಲ್ಮೀಕಿ ನಿಗಮ (MUDA And Valmiki Scam) ಅಕ್ರಮಗಳ ವಿರುದ್ಧ ದೋಸ್ತಿಗಳ ಪಾದಯಾತ್ರೆಗೆ ಅಖಾಡ ಸಜ್ಜಾಗಿದೆ. ಪಾದಯಾತ್ರೆಯ ರೂಟ್ಮ್ಯಾಪ್ ಮತ್ತು ಸಿದ್ಧತೆ ಕುರಿತು ಸೋಮವಾರ ಬಿಜೆಪಿ ನಾಯಕರು (BJP Leader) ಪೂರ್ವಭಾವಿ ಸಭೆ ನಡೆಸಿದರು.
ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ಆಗಸ್ಟ್ 3ರ ಶನಿವಾರ ಬೆಳಗ್ಗೆ 8.30ಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಹೆಚ್ಡಿಕೆ, ಪ್ರಹ್ಲಾದ್ ಜೋಶಿಯವರಿಂದ ಪಾದಯಾತ್ರೆಗೆ ಚಾಲನೆ ಸಿಗಲಿದೆ. ಈವೇಳೆ ಬಿಜೆಪಿ ಜೆಡಿಎಸ್ನ ಎಲ್ಲ ಹಿರಿಯರು ಉಪಸ್ಥಿತರಿರಲಿದ್ದಾರೆ. ಕೆಂಗೇರಿ ಬಳಿಯ ಕೆಂಪಮ್ಮ ದೇಗುಲ, ಗಣಪತಿ ದೇಗುಲದಲ್ಲಿ ಪೂಜೆ ಮಾಡಿ ಪಾದಯಾತ್ರೆ ಆರಂಭಿಸುತ್ತೇವೆ. ಆಗಸ್ಟ್ 10ರ ಶನಿವಾರ ಪಾದಯಾತ್ರೆಯ ಸಮಾರೋಪ ಇದ್ದು, ನಮ್ಮ ವರಿಷ್ಠರು ಪಾಲ್ಗೊಳ್ತಾರೆ ಅಂತ ತಿಳಿಸಿದರು.
BSY, ಸಿದ್ರಾಮಯ್ಯಗೆ ಅವರ ಮಕ್ಕಳನ್ನು ಬೆಳೆಸೋ ಚಿಂತೆ: ಪ್ರತಾಪ್ ಸಿಂಹ ಕಿಡಿ!
ಇನ್ನೂ ಒಟ್ಟು ಏಳು ದಿನಗಳ ಕಾಲ ಪಾದಯಾತ್ರೆ (Mysuru Chalo Padayatra) ನಡೆಯಲಿದ್ದು, ನಿತ್ಯ 20 ನಡಿಗೆ ಇರಲಿದೆ. ಬೆಳಗ್ಗೆ 10 ಕಿಮೀ, ಊಟದ ನಂತರ 10 ಕಿಮೀ ಪಾದಯಾತ್ರೆ. 224 ವಿಧಾನಸಭೆ ಕ್ಷೇತ್ರಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಿತ್ಯ 8-10 ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಾದಯಾತ್ರೆಗೆ ಪಕ್ಷದಿಂದ ಪ್ರಮುಖರ ತಂಡ ರಚಿಸಲಾಗಿದೆ. ಪ್ರತೀ ಜಿಲ್ಲೆಯಿಂದ ಕನಿಷ್ಠ 200 ಜನ ಬರ್ತಾರೆ, ಏಳು ದಿನವೂ ಅವರು ಇರ್ತಾರೆ. ವಸತಿ ವ್ಯವಸ್ಥೆ, ಊಟೋಪಹಾರಕ್ಕೆ ತಂಡಗಳನ್ನು ರಚಿಸಲಾಗಿದೆ. ಈ ಪಾದಯಾತ್ರೆ ಯಶಸ್ವಿಗೊಳಿಸಲು ಬಿಜೆಪಿ ಜೆಡಿಎಸ್ ಮುಖಂಡರ ಸಮನ್ವಯ ತಂಡವನ್ನೂ ರಚಿಸ್ತೇವೆ ಅಂತ ಇದೇ ವೇಳೆ ವಿಜಯೇಂದ್ರ ತಿಳಿಸಿದರು.