ಕೋಲಾರ:- ವಿಜಯೇಂದ್ರ ಬದಲಾವಣೆಯಾದ್ರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ ಎಂದು ಬಿ ಶ್ರೀರಾಮುಲು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು , ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದರು.
ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಬಸನಗೌಡ ಯತ್ನಾಳ್ ನಮ್ಮ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.
ಮುಂಬರುವ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲುವ ಕೆಲಸ ಮಾಡುತ್ತೇನೆ. ಯಡಿಯೂರಪ್ಪ ಅವರ ಆಶೀರ್ವಾದ ಬೇಕಾಗಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆ ಮಾಡಿದರೆ ನಾನು ಸಿದ್ಧ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಇರುವ ಗೊಂದಲ ನಿವಾರಣೆಯಾಗಬೇಕು. ದೆಹಲಿಗೆ ಹೋಗಿರುವವರನ್ನು ಸಮಾಧಾನ ಮಾಡಬೇಕಾಗಿದೆ. ದಕ್ಷಿಣ ಭಾರತದ ಭೀಷ್ಮರಾಗಿರುವ ಯಡಿಯೂರಪ್ಪ ಮುಂದಾಳತ್ವ ತೆಗೆದುಕೊಳ್ಳಬೇಕಾಗಿದೆ ಎಂದರು.