ಅಮೇರಿಕಾ:- ನನ್ನನ್ನು ಆಯ್ಕೆ ಮಾಡದಿದ್ದರೆ ರಕ್ತಪಾತ ಮಾಡುವುದು ಗ್ಯಾರಂಟಿ ಎಂದು ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರದ ಭಾಗವಾಗಿ ಡೊನಾಲ್ಡ್ ಟ್ರಂಪ್ ಓಹಿಯೋದಲ್ಲಿ ಭಾಗವಹಿಸಿದ್ದರು. ಅಧ್ಯಕ್ಷೀಯ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನಾಂಕವಾಗಿದೆ. ಹಿಂಸಾಕೃತ್ಯಗಳಲ್ಲಿ ಜನ ಸಾಯುವುದು ಖಚಿತ. ನನ್ನನ್ನು ಆಯ್ಕೆ ಮಾಡದಿದ್ದರೆ ರಕ್ತಪಾತ ಮಾಡುವುದಾಗಿ ಬೆದರಿಕೆ ಹಾಕಿದರು.
ನಮ್ಮ ದೇಶಕ್ಕೆ ಇತಿಹಾಸ ನಿರ್ಮಿಸಲಿದೆ ಎಂದು ನಾನು ನಂಬುತ್ತೇನೆ. ಚೀನಾ ಮೆಕ್ಸಿಕೊದಲ್ಲಿ ಕಾರು ಉತ್ಪಾದಿಸಿ ಅದನ್ನು ಅಮೆರಿಕಕ್ಕೆ ಮಾರಾಟ ಮಾಡುವ ಯೋಜನೆಯನ್ನು ಟೀಕಿಸಿ, ತಾನು ಮರು ಆಯ್ಕೆಯಾದರೆ ಚೀನಾವು ಅಮೆರಿಕಕ್ಕೆ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ನಾನು ಗೆಲ್ಲದಿದ್ದರೆ, ಇಡೀ ವ್ಯವಸ್ಥೆಗೇ ಅಪಾಯ ಬರಲಿದೆ. ಅದು ದೇಶಕ್ಕೇ ಸಂಭವಿಸಲಿದೆ ಎಂದರು.
ಜೋ ಬಿಡೆನ್ ಮತ್ತು ಡೊನಾಲ್ಡ್ ಟ್ರಂಪ್ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕಾಗಿ ಹೋರಾಡುತ್ತಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸತತ ಗೆಲುವಿನೊಂದಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಈಗ ಭಯಂಕರ ಬೆದರಿಕೆ ಹಾಕಿದ್ದಾರೆ.