ಬೆಳಗಾವಿ: ನಾಳೆ ಏನಾದ್ರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ದೇಶದ ಪ್ರಧಾನಿ ಆಗುವುದಿಲ್ಲವೇ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ರಾಜು ಕಾಗೆ ಪ್ರಶ್ನಿಸಿದ್ದಾರೆ. ಮದಭಾವಿ ಗ್ರಾಮದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪ್ರಧಾನಿ ಹುದ್ದೆಗೆ ಯಾರೂ ಸೂಕ್ತ ಅಭ್ಯರ್ಥಿ ಇಲ್ಲವೇನೋ?. ಇವತ್ತಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಮೋದಿ ಅವರನ್ನು ತೆಗೆದುಕೊಂಡು ಏನು ಮಾಡುತ್ತೀರಿ? ಎಂದ ಕೇಳಿದರು.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೇಕು. ಬಿಜೆಪಿ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಿದ್ದಾರೆ. ಈ ಭಾಗದ ಸಂಸದರು ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಇಲ್ಲಿ ಏನಾದರೂ ಸಮಸ್ಯೆಯಾದರೆ ನಾನೇ ನಿಮಗೆ ಸಹಾಯ ಮಾಡಬೇಕು. ಮೋದಿ ಇಲ್ಲಿ ಬರಲು ಆಗುವುದಿಲ್ಲ. ಹೀಗಾಗಿ ನೀವು ನಮಗೆ ಮತ ನೀಡಬೇಕು ಎಂದು ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)