ಬೆಂಗಳೂರು: ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಆಗಿದ್ದರೆ 10 ಸಾವಿರ ಕಿಲೋ ಮೀಟರ್ ನಡೆಯೋದಕ್ಕೆ ಆಗುತ್ತಿರಲಿಲ್ಲ ಎಂದು ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ಸಂಘಪರಿವಾರದವರು ವ್ಯಸನಿಗಳು, ವಿಕೃತರು. ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಇವರು ಅಪಪ್ರಚಾರ ಮಾಡಿಕೊಂಡು ಬರ್ತಿದ್ದಾರೆ.
ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿಯನ್ನು ಬೇರೆ ಅರ್ಥದ ಪಾರ್ಟಿ ಮಾಡೋದಕ್ಕೆ ಇವರು ಹೊರಟಿದ್ದಾರೆ. ರಾಹುಲ್ ಗಾಂಧಿ ಇವರು ಹೇಳಿದ ತರ ಅಡಿಕ್ಟ್ ಆಗಿದ್ದರೆ, 10 ಸಾವಿರ ಕಿಲೋ ಮೀಟರ್ ಭಾರತ್ ಜೋಡೋದಲ್ಲಿ ನಡೆಯೋದಕ್ಕೆ ಆಗುತ್ತಿರಲಿಲ್ಲ. ಈಗ ಅಂಬೇಡ್ಕರ್ ಬಗ್ಗೆಯೂ ಅಪಪ್ರಚಾರ ಮಾಡ್ತಿದ್ದಾರೆ. ಇದು ಉದ್ದೇಶಪೂರ್ವಕವಾಗಿ ಲೆಕ್ಕಾಚಾರ ಹಾಕಿಕೊಂಡೇ ಹೇಳಿದ ಮಾತು ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.
PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ..! ಈಗಲೇ ಅರ್ಜಿ ಸಲ್ಲಿಸಿ
ಬಿಜೆಪಿಯವರಿಗೆ ದಲಿತರು, ಕೇಳವರ್ಗದವರು, ಶೂದ್ರರು ಯಾರೂ ಬೇಕಾಗಿಲ್ಲ. ಇವರು ಮೇಲ್ವರ್ಗದ ಜೊತೆಗೆ ಇರಬೇಕು ಎಂಬ ಉದ್ದೇಶ. ಅವರಿಗೆ ಕೆಳವರ್ಗದ ಅಭಿವೃದ್ಧಿ ಮಾಡುವುದು ಬೇಕಾಗಿಯೂ ಇಲ್ಲ. ಸುಮ್ಮನೆ ಅಮಿತ್ ಶಾ ಈ ಮಾತು ಹೇಳಿದ್ದಾರೆ ಅಂದುಕೊಳ್ಳಬೇಡಿ. ಇದನ್ನ ಪ್ಲ್ಯಾನ್ ಮಾಡಿಯೇ ಹೇಳಿರೋದು ಎಂದು ಆರೋಪಿಸಿದ್ದಾರೆ.