ಮಂಡ್ಯ:- ಮಾಜಿ ಸಿಎಂ ಸದಾನಂದಗೌಡರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಹಿರಿಯ ನಾಯಕರು ಆಲೋಚನೆ ಮಾಡಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ!
ಹಿರಿಯ ನಾಯಕರ ಅನುಭವ ಹಾಗೂ ಅವರ ಹಿಂಬಾಲಕರ ಪಡೆಯನ್ನು ಹೈಕಮಾಂಡ್ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಬೇಕು ಎಂದಿದ್ದಾರೆ. ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೆ ಆದ ಹಿಂಬಾಲಕರ ಪಡೆ ಇರುತ್ತದೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ಚಿಂತನೆ ನಡೆಸಬೇಕು. ನನ್ನನ್ನು ಉಪಯೋಗಿಸಿ ಕೊಂಡರೆ ಪಕ್ಷಕ್ಕಾಗಿ ದುಡಿಯುತ್ತೇನೆ ಇಲ್ಲವಾದಲ್ಲಿ ಸುಖ ಜೀವನದಲ್ಲಿ ಇರುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್ ವಿರುದ್ಧ ಗುಡುಗಿದ್ದಾರೆ.