ಬೆಂಗಳೂರು:- ಸಿದ್ದರಾಮಯ್ಯ CM ಸ್ಥಾನದಿಂದ ಇಳಿದ್ರೆ ಕರ್ನಾಟಕದಲ್ಲಿ ಕ್ರಾಂತಿ ಗ್ಯಾರಂಟಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
BBK 11: ಈ ವಾರವೂ ಇರಲ್ವಾ ಕಿಚ್ಚನ ಪಂಚಾಯಿತಿ!? ಶೋ ನೋಡಲು ಬೇಸರ ಅಂತಿದ್ದಾರೆ ಜನ!
ಈ ಸಂಬಂಧ ಮಾತನಾಡಿದ ಅವರು,ಎಂದಾದರೂ ಒಂದು ದಿನ ಯಾವುದಾದರೂ ಶಕ್ತಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸೋಕೆ ಹೋದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ.
ಇದು ಸಿದ್ದರಾಮಯ್ಯ ಅಂತಾ ಪ್ರಶ್ನೆ ಅಲ್ಲ, ಪ್ರಜಾಪ್ರಭುತ್ವಕ್ಕೆ ಅನ್ಯಾಯ ಮಾಡಿದಂತೆ. ಈ ಬಗ್ಗೆ ಎಲ್ಲಾ ಪಕ್ಷದವರು ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.
ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೇ ಬೀದಿಯಲ್ಲಿ ಹೋಗುವವರಿಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನಲ್ಲಿ ಯಾರೂ ಇಲ್ಲ. ಸಂವಿಧಾನ ಬದ್ಧವಾಗಿ ಯಾರೂ ಬೇಕಾದರೂ ಸಿಎಂ ಆಗಬಹುದು. ಆದರೆ ಸಿದ್ದರಾಮಯ್ಯ ಇತಿಹಾಸವೇನು, ಅವರ ಮಾತೇನು, ಅವರ ವಯಸ್ಸೇನು. ಜೆಡಿಎಸ್ನಿಂದ ಸಿದ್ದರಾಮಯ್ಯರನ್ನು ತೆಗೆದಾಗ ನಾನೇ ಪ್ರತಿಭಟನೆ ಮಾಡಿದ್ದು, ಅಂದು ಜೆಡಿಎಸ್ನವರನ್ನು ಪ್ರಶ್ನೆ ಮಾಡಿದ್ದೂ ನಾನೇ ಎಂದು ಹೇಳಿದ್ದಾರೆ.