ಹಾಸನ: ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ.
Recruitment: ನಿಮ್ಹಾನ್ಸ್’ನಲ್ಲಿ ಕೆಲಸ ಖಾಲಿ ಇದೆ..! ತಿಂಗಳಿಗೆ ₹ 90,000 ಸಂಬಳ – ಇಂದೇ ಕೊನೆ ದಿನಾಂಕ
ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಕನಕ ಜಯಂತಿ ಆಚರಣೆ ಶುರು ಮಾಡಿದರು. ನೀವು ಬೆಂಬಲಿಸಿದ್ದರಿಂದಲೇ 2ನೇ ಬಾರಿ ಸಿಎಂ ಆದರು ಎಂದು ಯತೀಂದ್ರ ಹೇಳಿದ್ದಾರೆ.