ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ತಪಾಸಣೆಯನ್ನು ಶರವೇಗದಲ್ಲಿ ನಡೆಸಲಾ ಗುತ್ತಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕೊವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚುತ್ತಿದ್ದು,
ಇದರ ಮಧ್ಯೆ ಒಂದೇ ದಿನ 2 ಲಕ್ಷ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 69,952 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,33,308 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 2,03,260 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು. ಅಲ್ಲದೇ ಸೋಂಕಿನ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ವಹಿಸದೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸುಧಾಕರ್ ಸಲಹೆ ನೀಡಿದ್ದಾರೆ.
