ಕೋಲಾರ:- ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ಅಖಿಲ ಭಾರತ ಮಟ್ಟದಲ್ಲಿ ತಮ್ಮ ಪಕ್ಷವು 5 ನ್ಯಾಯಗಳ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ ಮತ್ತು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು ಅವೆಲ್ಲವನ್ನೂ ಜಾರಿಗೊಳಿಸಲು ಕಟಿಬದ್ಧರಾಗಿದ್ದಾರೆ ಎಂದು ಖರ್ಗೆ ಹೇಳಿದರು.
ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಖರ್ಗೆಯವರ ರಾಹುಲ್ ರನ್ನು ಭಾಷಣಕ್ಕೆ ಆಹ್ವಾನಿಸುವ ಮೊದಲು ಜೈ ಹಿಂದ್ ಮತ್ತು ಜೈ ಕಾಂಗ್ರೆಸ್ ಅಂತ ಜೋರಾಗಿ ಘೋಷಣೆ ಕೂಗಿದರು.