ತುಮಕೂರು:-ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಈ ಸಂಬಂಧ ಮಾತನಾಡಿದ ಅವರು,ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇದೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ಹೇಳಿದರು.
ಲೋಕಸಭೆಯನ್ನೂ ಒಮ್ಮೆ ನೋಡುವ ಆಸೆಯಿದೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ.
ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ಗೆ ಬರುವ ಬಗ್ಗೆ ನನ್ನ ಬಳಿಯೂ ಕೆಲವರು ಚರ್ಚೆ ನಡೆಸಿದ್ದಾರೆ. ಡಾ.ಜಿ.ಪರಮೇಶ್ವರ್ ಹತ್ತಿರವೂ ಕೆಲವರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರುವ ವಿಚಾರ ಗೊತ್ತಿಲ್ಲ ಎಂದರು.
ಶೀಘ್ರದಲ್ಲೇ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ. ಅದನ್ನು ಸಾರ್ವಜನಿಕರ ಚರ್ಚೆಗೆ ಬಿಡಲಾಗುವುದು. ಅಲ್ಲಿ ಬರುವ ಅಭಿಪ್ರಾಯವನ್ನು ಪರಿಗಣಿಸಿ, ಯಾವುದನ್ನು ಬಿಡಬೇಕು, ತೆಗೆದುಕೊಳ್ಳಬೇಕು ಎಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.ವರದಿ ಬಂದಾಕ್ಷಣ ಒಪ್ಪಬೇಕೆಂಬ ನಿಯಮವಿಲ್ಲ ಎಂದು ಹೇಳಿದರು.
ಮಾಸ್ ಲೀಡರ್ ಆಗಲು ಸಾಧ್ಯವಿಲ್ಲ: ಸರ್ಕಾರ ಇದ್ದಾಗ ಉಪ ಚುನಾವಣೆಗಳಲ್ಲಿ ಎರಡು ಸ್ಥಾನ ಗೆದ್ದಾಕ್ಷಣ ಮಾಸ್ ಲೀಡರ್ ಆಗಲು ಸಾಧ್ಯವಿಲ್ಲ, ಜನರ ಜೊತೆ ಇದ್ದು ಜನರಿಗಾಗಿ ಹೋರಾಟ ಮಾಡಿ ಮಾಸ್ ಲೀಡರ್ ಆಗಬೇಕು. ಬಿಜೆಪಿಯಲ್ಲಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಅಧ್ಯಕ್ಷ ಮತ್ತು ವಿರೋಧಪಕ್ಷ ಸ್ಥಾನಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಅವರ ಮಗ ವಿಜಯೇಂದ್ರನನ್ನು ತಂದಿದ್ದಾರೆ. ಇದರ ಬಗ್ಗೆ ಬಿಜೆಪಿ ಮುಖಂಡರಲ್ಲಿಯೇ ಅಸಮಾಧಾನವಿದೆ. ಒಂದೆರಡು ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ದೊಡ್ಡ ಸಂಘಟನಾ ಚುತುರ ಎಂದು ಸರ್ಟಿಫಿಕೇಟ್ ನೀಡಲಾಗದು ಎಂದು ಹೇಳಿದರು.