ಬೆಂಗಳೂರು: ಮನೆಯಲ್ಲಿ ಯಾರು ಇಲ್ಲದ ವೇಳೆ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಮಾಗಡಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಒಡವೆ ಕಳೆದುಕೊಂಡ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು, ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 16 ಲಕ್ಷದ 65 ಸಾವಿರ ಮೌಲ್ಯದ 333 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿಕೊಂಡಿದ್ದಾರೆ. ಅಲ್ಲದೇ ಈ ಆರೋಪಿಗಳು ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಸದ್ಯ ಆರೋಪಿಗಳ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
