ಬೆಳಗಾವಿ: ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದ್ದು, ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಒಂದು ತಿಂಗಳು ಹಣ ತುಂಬಲು ತಡವಾಗಿದ್ದಕ್ಕೆ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಠಿಕಾಣಿ ಹೂಡಿದ್ದಾರೆ.
ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಯಮನ ಕಿರುಕುಳ: ನಾಲ್ವರು ಸಿಬ್ಬಂದಿಗಳು ಅರೆಸ್ಟ್!
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೂಪಾ ಕುಸನಾಳೆ, ಮಾಲಾ ಕಾಂಬಳೆ, ರೇಖಾ ಕಾಂಬಳೆ ಎಂಬುವವರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿವಿಧ ಫೈನಾನ್ಸ್ ಗಳಲ್ಲಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿರುವ ಮಹಿಳೆಯರು. ಸದ್ಯ ಸಾಲ ಕಟ್ಟಲು ಆಗದೆ ಕಣ್ಣೀರು ಹಾಕುತ್ತಿದ್ದು, ಸ್ವಲ್ಪ ಸಮಯಾವಕಾಶ ನೀಡಿ ಎಂದು ಕೇಳಿದರು ಒತ್ತಡ ಹಾಕುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆ ವರೆಗೆ ಮನೆಯಲ್ಲಿ ಬಂದು ಕೂಡುತ್ತಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.