ಬೆಳಗಾವಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಜಾರಕಿಹೊಳಿ ಪರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ಸತೀಶ್ ಜಾರಕಿಹೊಳಿಗೆ ಸಿಗುತ್ತಾ ಅವಕಾಶ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಜಾರಕಿಹೊಳಿ ಪರ ಅಭಿಯಾನ ನಡೆಯುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಜಾರಕಿಹೊಳಿ ಸಿಎಂ ಆಗಲಿ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಪೋಸ್ಟರ್ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
Eye Twitching: ಎಡಗಣ್ಣು ಪಟಪಟ ಅಂತ ಹೊಡೆದುಕೊಳ್ತಿದ್ರೆ ಹೀಗೆಲ್ಲಾ ಆಗ್ಬೋದಂತೆ!
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಗ್ರೂಪ್ ಕೂಡ ಕ್ರಿಯೆಟ್ ಮಾಡಲಾಗಿದೆ. ಅಭಿಮಾನಿಗಳ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಅದಾದ ಬಳಿಕ, ಮುಂದಿನ ಸಿಎಂ ಜಾರಕಿಹೊಳಿ ಎಂಬ ಕೂಗು ಹೆಚ್ಚಾಗಿದೆ.