ಬೆಂಗಳೂರು:- ಪರಿಸ್ಥಿತಿ ಅನಿವಾರ್ಯವಾದರೆ ತ್ಯಾಗ ಮಾಡಲೇಬೇಕಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಸಾಕಷ್ಟು ನಾಯಕರು ತ್ಯಾಗ ಮಾಡಿದ್ದಾರೆ ಎಂದು ಮಾತನಾಡುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ.
ಟ್ರಾಫಿಕ್, ಟ್ರಾಫಿಕ್: ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿದೆ ಬೆಂಗಳೂರು ಟ್ರಾಫಿಕ್!
ಸೋನಿಯಾ, ರಾಹುಲ್ ಗಾಂಧಿ ಅವರೇ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರಿಗಿಂತ ನಾವು ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ನಾವು ಅನಿವಾರ್ಯ ಪರಿಸ್ಥಿತಿ ಬಂದರೆ ತ್ಯಾಗ ಮಾಡಬೇಕಾಗುತ್ತದೆ ಎಂಬ ಅರ್ಥದಲ್ಲಿ ಸಿಎಂ ಮಾತನಾಡಿದ್ದಾರೆ
ತ್ಯಾಗದ ಮಾತನಾಡುವ ಮೂಲಕ ಒಂದು ರೀತಿಯಲ್ಲಿ ಎಲ್ಲರನ್ನೂ ಸಿಎಂ ಗೊಂದಲದಲ್ಲಿ ಇಟ್ಟಿದ್ದಾರೆ. ಸದ್ಯದ ಪರಿಸ್ಥಿತಿ ತಿಳಿಗೊಳಿಸಲು ತ್ಯಾಗದ ಅಸ್ತ್ರ ಹೂಡಿದ ಸಿಎಂ ತಮ್ಮ ಬೆಂಬಲಿಗರಿಗೂ ಹೆಚ್ಚು ಮಾತನಾಡದಂತೆ ಎಚ್ಚರಿಕೆ ನೀಡಿದಂತಿದೆ.
ಅಗತ್ಯ ಸಂದರ್ಭದಲ್ಲಿ ತ್ಯಾಗಕ್ಕೆ ಸಿದ್ದ ಎಂಬ ಸಂದೇಶದ ಮೂಲಕ ವಿರೋಧಿ ಬಣಕ್ಕೂ ಸಂದೇಶವನ್ನು ರವಾನೆ ಮಾಡಿದ್ದಾರೆ. ತ್ಯಾಗದ ವಿಚಾರದಲ್ಲಿ ಮಾರ್ಮಿಕ ಮಾತನಾಡಿ ಅವರವರ ಲೆಕ್ಕಾಚಾರದ ಪ್ರಕಾರ ಅರ್ಥೈಸಿಕೊಳ್ಳುವಂತೆ ಮಾಡಿ ಸಿದ್ದರಾಮಯ್ಯ ಈಗ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.