Facebook Twitter Instagram YouTube
    ಕನ್ನಡ English తెలుగు
    Saturday, December 2
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಸುಳ್ಳಿನ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ – ಕೋಡಿಹಳ್ಳಿ ಚಂದ್ರಶೇಖರ್‌

    AIN AuthorBy AIN AuthorNovember 20, 2023
    Share
    Facebook Twitter LinkedIn Pinterest Email

    ಬೀದರ್:- ಸಿದ್ದರಾಮಯ್ಯ ಸುಳ್ಳಿನ ಮುಖ್ಯಮಂತ್ರಿ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ ಮಾಡಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಸುಳ್ಳಿನ ಮುಖ್ಯಮಂತ್ರಿ. ರೈತರಿಗೆ ಕೊಟ್ಟ ಮಾತು ಮುರಿಯುತ್ತಿದ್ದಾರೆ. ಹಣದ ಹಿಂದೆ ಬಿದ್ದಿದ್ದಾರೆ’ ಎಂದರು.

    Demo

    ಅಧಿಕಾರ ಹಿಡಿಯಲು ಏನೇನು ನಾಜೂಕುತನ, ಸುಳ್ಳು ಹೇಳಬೇಕಿತ್ತೋ ಹೇಳಿದ್ದರು. ಕೇಂದ್ರದ ಬಿಜೆಪಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದ ನಂತರ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಅವುಗಳನ್ನು ಹಿಂತೆಗೆದುಕೊಂಡಿತು. ಆದರೆ, ರಾಜ್ಯದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದರು. ಇದರ ವಿರುದ್ಧ ರಾಜ್ಯದಲ್ಲಿ ಹೋರಾಟ ನಡೆಸಿದಾಗ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನಮ್ಮ ಹೋರಾಟಗಳಲ್ಲಿ ಭಾಗವಹಿಸಿ, ನಮ್ಮ ಸರ್ಕಾರ ಬಂದ ನಂತರ ಮೂರೂ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈಗ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಹಳ ನಾಜೂಕಿನಿಂದ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.

    ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ವಿದ್ಯುತ್‌ಶಕ್ತಿ ಇಲಾಖೆಯಿಂದ ಹಿಂದೆ ನೆರವು ನೀಡಲಾಗುತ್ತಿತ್ತು. ಈಗ ಹೊಸದಾಗಿ ಆದೇಶ ಹೊರಡಿಸಿ, ರೈತರು ಅವರ ಖರ್ಚಿನಲ್ಲಿಯೇ ಅಗತ್ಯ ವಸ್ತುಗಳನ್ನು ತರಿಸಿಕೊಂಡು ಸಂಪರ್ಕ ಪಡೆಯಬೇಕು ಎಂದು ಆದೇಶ ಹೊರಡಿಸಿದ್ದಾರೆ. ರೈತರ ಹಿತ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು.

    ಓಟಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಹೊರತು ರೈತರು, ಜನಸಾಮಾನ್ಯರ ಕಲ್ಯಾಣಕ್ಕಾಗಿ ಅಲ್ಲ. ಹಿಂದೆ ಬಿಜೆಪಿಯವರು ಏನು ಮಾಡುತ್ತಿದ್ದರೋ ಅದನ್ನೇ ಈಗ ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಹೆಸರಷ್ಟೇ ಬದಲಾಗಿದೆ. ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತಾರೆ ಎಂದು ರೈತರು ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿ ಕೆಲಸ ಮಾಡಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ರಾಜಕೀಯ ಪಕ್ಷವೊಂದನ್ನು ಬೆಂಬಲಿಸಿದ್ದರು. ಆದರೆ, ಹಾಲಿ ಸರ್ಕಾರ ಮಾಡುತ್ತಿರುವುದೇ ಬೇರೆ ಎಂದರು.


    Share. Facebook Twitter LinkedIn Email WhatsApp

    Related Posts

    ನಿವೃತ್ತ ಪಿಂಚಿಣಿಗೆ ಲಂಚ- ಬಿಒಓ ವಿದ್ಯಾ ಕುಂದರಗಿ ಲೋಕಾ ಬಲೆಗೆ

    December 2, 2023

    Chamarajanagar: ಅರಿಶಿಣ ನಡುವೆ ಗಾಂಜಾ ಬೆಳೆದಿದ್ದ ಅಪ್ಪ ಮಗನ ಬಂಧನ..!

    December 2, 2023

    Renukacharya: ಯಾರು ಬಿಜೆಪಿ ಬಿಟ್ಟು ಹೋಗುವುದಿಲ್ಲ: ರೇಣುಕಾಚಾರ್ಯ

    December 2, 2023

    Bosaraju: ತೆಲಂಗಾಣದಲ್ಲಿ ನಿಚ್ಚಳ ಬಹುಮತ ನಿಶ್ಚಿತ: ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಸನ್ನಿಹಿತ – ಬೋಸರಾಜು

    December 2, 2023

    ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಶುರು

    December 2, 2023

    Satish Jarakiholi: ಬಾಂಬ್ ಕರೆ ಹುಸಿ ಎಂದ ಬಳಿಕವೂ ಆ ವಿಷಯವನ್ನೇ ಹಿಡಿದು ಜಗ್ಗಾಡುವುದು ಯಾಕೆ?: ಸತೀಶ್ ಜಾರಕಿಹೊಳಿ

    December 2, 2023

    ನಗರದಲ್ಲಿ ಸ್ವಾಗತ ಕಮಾನು ನಿರ್ಮಾಣ ವಿವಾದ: ಕೋಮು ಸೌಹಾರ್ದತೆ ಕದಡಲು ಬಿಡುವುದಿಲ್ಲ -ಬೋಸರಾಜು

    December 2, 2023

    ನಮ್ಮ ಕಬ್ಬು ನಮ್ಮ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ರೈತರ ಅಗ್ರಹ

    December 2, 2023

    Siddaramaiah: ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ: ಸಿದ್ದರಾಮಯ್ಯ

    December 2, 2023

    Dharwad: ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಪಾಠ ಮಾಡಿದ ಲೋಕಾಯುಕ್ತ ನ್ಯಾಯಮೂರ್ತಿ

    December 2, 2023

    ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಚೇಂಬರ್‌’ನಲ್ಲೇ ವಾಮಾಚಾರ..!

    December 2, 2023

    Govinda Karajola: ಶಾಲೆಗಳಿಗೆ ಬಾಂಬ್ ಬೆದರಿಕೆಗೆ ವೀಕ್ ಲೀಡರ್ಶಿಪ್ ಕಾರಣ: ಗೋವಿಂದ ಕಾರಜೋಳ

    December 2, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.