ಬೆಂಗಳೂರು: ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಹೈಕಮಾಂಡ್ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಬಗ್ಗೆ ನನಗೆ ಗೊತ್ತಿಲ್ಲ.
ನಮ್ಮ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದರು.
ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದರು. ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಪರಮೇಶ್ವರ್ ಹೇಳಿದರು.