ಬೆಂಗಳೂರು: ನಿನ್ನೆಯಷ್ಟೇ ರಾಮಮಂದಿರದ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಾಗಿದೆ ಎಲ್ಲರು ಸಂಭ್ರಮದಲ್ಲಿ ತೇಲಾಡುತ್ತಿದ್ದರೆ ಈ ಹೊತ್ತಿನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಹೊಸ ವಿವಾದವನ್ನು ಸೃಷ್ಟಿಮಾಡಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ನಮಗೆ ಮೋದಿ ರಾಮಬೇಡ, ದಶರಥ ರಾಮಬೇಕು ಅಂತ ಗೃಹ ಸಚಿವ ಪರಮೇಶ್ವರ್ ಮತ್ತೊಮ್ಮೆ ವಿವಾದ ಸೃಷ್ಟಿಸಿ ಮೈ ಮೇಲೆ ಎಳೆದುಕೊಳ್ಳಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಅಂತ ಪ್ರಶ್ನೆ ಮಾಡಿದ್ರು.
ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡೋರು ಬೇಕಿಲ್ಲ ಎಂದರು.