ಕೋಲ್ಕತ್ತಾ: ಉತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಸಿದ್ದಿಕುಲ್ಲಾ ಚೌಧರಿ (Siddiqulla Chowdhury) ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಮಸೀದಿಯಲ್ಲಿ ಪೂಜೆಯನ್ನು ನಿಷೇಧಿಸುವಂತೆ ಕೋಲ್ಕತ್ತಾದಲ್ಲಿ ಜಮಿಯತ್ ಉಲೇಮಾ-ಎ-ಹಿಂದ್ ರ್ಯಾಲಿಯಲ್ಲಿ ಚೌಧರಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ವಾರಣಾಸಿಯ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡಿದೆ. ಇದು ಸಜಂಜಸವಲ್ಲ. ಯೋಗಿ ಆದಿತ್ಯನಾಥ್ (Yogi Adityanath) ಅವರು ಪಶ್ಚಿಮ ಬಂಗಾಳಕ್ಕೆ ಬಂದರೆ ನಾವು ಅವರನ್ನು ಸುತ್ತುವರಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ BCCI ಖಡಕ್ ಸೂಚನೆ..!
ಹಿಂದೂ ಆರಾಧಕರು ಬಲವಂತವಾಗಿ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಪೂಜೆ ಪ್ರಾರಂಭಿಸಿದ್ದಾರೆ. ಹೀಗಾಗಿ ಅವರು ತಕ್ಷಣವೇ ಅಲ್ಲಿಂದ ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ಈ ಕ್ರಮಕ್ಕೆ ಏನಾದರೂ ಅರ್ಥ ಇದೆಯಾ ಎಂದು ಪ್ರಶ್ನಿಸಿದರು. ಅವರು ಬಂಗಾಳಕ್ಕೆ ಬಂದರೆ ಅವರನ್ನು ಹೊರಗೆ ಹೋಗಲು ನಾವು ಬಿಡಲ್ಲ ಎಂದು ಕಿಡಿಕಾರಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)