ಸ್ಟೇಜ್ ಮೇಲೆ ಮಾತನಾಡುತ್ತಿರುವಾಗ, ಮದುವೆ ಫಂಕ್ಷನ್ ನಲ್ಲಿ ಡಾನ್ಸ್ ಮಾಡುತ್ತಾ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಾ ಅಥವಾ ಕ್ರಿಕೆಟ್ ಆಡುವಾಗಲೇ ಹೃದಯಘಾತವಾಗಿರುವ ಅನೇಕ ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಹೀಗಾಗಿ ಪುಟ್ಟ ಹೃದಯದ ವಿಚಾರದಲ್ಲಿ ಯಾವತ್ತಿಗೂ ಕೂಡ ನಿರ್ಲಕ್ಷ್ಯ ಮಾಡಬಾರದು.
ಮೈಕ್ರೋ ಫೈನಾನ್ಸ್ ಬಂದ್ ಆಗಬೇಕು; ಸರ್ಕಾರದಿಂದ ಸೂಕ್ತ ನಿರ್ಧಾರ ಕೈಗೊಳ್ಳಲಿದೆ; ಸಚಿವ ಲಾಡ್
35- 40 ನೇ ವಯಸ್ಸಿನಲ್ಲಿ ದೇಹದಲ್ಲಿ ಅನೇಕ ರೀತಿಯ ಸಮಸ್ಯೆಗಳು ಕಂಡು ಬರಲು ಪ್ರಾರಂಭಿಸುತ್ತವೆ. ಈ ವಯಸ್ಸಿನಲ್ಲಿ ಹೃದ್ರೋಗದಿಂದ ಯಕೃತ್ತಿನ ವರೆಗೆ ನಾನಾ ರೀತಿಯ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಹಾಗಾದರೆ 35- 40 ನೇ ವಯಸ್ಸಿನಲ್ಲಿ ಆರೋಗ್ಯವಾಗಿರಲು ಯಾವ ವಿಷಯಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂಬುದನ್ನು ತಜ್ಞರಿಂದ ತಿಳಿದುಕೊಳ್ಳಿ.
ಈ ವಯಸ್ಸಿನಲ್ಲಿ ಉತ್ತಮ ಜೀವನಶೈಲಿ ಮತ್ತು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ. ಏಕೆಂದರೆ 35- 40 ರಲ್ಲಿ, ಮೂಳೆಗಳ ಬಲವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಫಲವತ್ತತೆಯೂ ಕ್ರಮೇಣ ಕಡಿಮೆಯಾಗುತ್ತದೆ ಮತ್ತು ಹೃದಯದಿಂದ ಯಕೃತ್ತು ಮತ್ತು ಮೂತ್ರಪಿಂಡದ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
35 ರಿಂದ 40 ನೇ ವಯಸ್ಸಿನಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಡಿ
*ಈ ವಯಸ್ಸಿನಲ್ಲಿ, ನೀವು ನಿಯಮಿತವಾಗಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕು. ಉದಾಹರಣೆಗೆ, ಕೊಲೆಸ್ಟ್ರಾಲ್ ಪರೀಕ್ಷೆ ಮತ್ತು ಹೃದ್ರೋಗದ ಯಾವುದೇ ಲಕ್ಷಣವಿದ್ದರೆ, ಎಕ್ಸ್- ರೇ ಮಾಡಬಹುದು.
*ಈ ವಯಸ್ಸಿನಲ್ಲಿ ರಕ್ತದೊತ್ತಡ ಸಮಸ್ಯೆಯೂ ಇದ್ದು ಇಂತಹ ಸಂದರ್ಭಗಳಲ್ಲಿ ಯಾವುದೇ ರೀತಿಯ ರೋಗಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ.
*ಈ ವಯಸ್ಸಿನಲ್ಲಿ, ಮಧುಮೇಹದ ಅಪಾಯವು ಹೆಚ್ಚಾಗುತ್ತದೆ, ಆದ್ದರಿಂದ ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳಿ.
*35 ರಿಂದ 40 ನೇ ವಯಸ್ಸಿನಲ್ಲಿ ಮೂಳೆ ಸಾಂದ್ರತೆ ಕಡಿಮೆಯಾಗುತ್ತದೆ, ಮತ್ತು ಮೂಳೆ ಮುರಿತದ ಅಪಾಯವೂ ಹೆಚ್ಚಾಗುತ್ತದೆ, ಆದ್ದರಿಂದ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಮಟ್ಟವನ್ನು ಪರಿಶೀಲಿಸುವುದು ಬಹಳ ಮುಖ್ಯ. ಇದು ಕಡಿಮೆಯಿದ್ದರೆ, ಬೆಳಗ್ಗಿನ ಸಮಯದಲ್ಲಿ ಸೂರ್ಯನ ಬೆಳಕನ್ನು ಸರಿಯಾಗಿ ಪಡೆದುಕೊಳ್ಳಿ.
ಮಾನಸಿಕ ಆರೋಗ್ಯವೂ ಬಹಳ ಮುಖ್ಯ;
*35- 40 ವಯಸ್ಸಿನಲ್ಲಿ ಒತ್ತಡ ಮತ್ತು ಆತಂಕ ಸಾಮಾನ್ಯ, ಆದರೆ ಅವುಗಳನ್ನು ನಿಭಾಯಿಸುವುದು ಬಹಳ ಮುಖ್ಯವಾಗುತ್ತದೆ. ಇದಕ್ಕಾಗಿ, ವಾಕಿಂಗ್, ಯೋಗದಂತಹ ಕನಿಷ್ಠ 30 ನಿಮಿಷಗಳ ಲಘು ವ್ಯಾಯಾಮವನ್ನು ಮಾಡುವುದು ಒಳ್ಳೆಯದು.
*ಆದಷ್ಟು ಫಾಸ್ಟ್ ಫುಡ್ ಸೇವನೆ ಮಾಡುವುದನ್ನು ತಪ್ಪಿಸಿ ಜೊತೆಗೆ ತಾಜಾ ಹಣ್ಣು, ತರಕಾರಿ, ಬೇಳೆ ಕಾಳುಗಳು ಮತ್ತು ಕಡಿಮೆ ಕೊಬ್ಬಿನ ಪ್ರೋಟೀನ್ಗಳ ಸೇವನೆಯನ್ನು ಹೆಚ್ಚಿಸಿಕೊಳ್ಳಿ.
*ಮಾನಸಿಕ ಒತ್ತಡಕ್ಕೆ ಒಳಗಾಗಬೇಡಿ.
*ಯಾವುದೇ ರೀತಿಯ ರೋಗ ಲಕ್ಷಣಗಳು ಕಾಣಿಸಿಕೊಂಡರೂ ಸಹ ಮೊದಲು ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳಿ. ಯಾವುದೇ ಕಾರಣಕ್ಕೂ ತಡಮಾಡಬೇಡಿ.