ಬೆಳಗ್ಗೆ ಕರಿಬೇವಿನ ಎಲೆಯಿಂದ ತಯಾರಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ದೊರೆಯುತ್ತವೆ.
ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಜೀರ್ಣಾಂಗವನ್ನು ಶುದ್ಧೀಕರಿಸುತ್ತದೆ ಮತ್ತು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.
ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕರಿಬೇವಿನ ಸೊಪ್ಪಿನಲ್ಲಿ ಆ್ಯಂಟಿಆಕ್ಸಿಡೆಂಟ್ಗಳು ಹೆಚ್ಚು. ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಮುಖದ ಮೇಲಿನ ಮೊಡವೆ ಮತ್ತು ಕಲೆಗಳನ್ನು ಹೋಗಲಾಡಿಸಿ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ.
ಕರಿಬೇವಿನ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಕರಿಬೇವಿನ ಎಲೆಗಳಲ್ಲಿರುವ ನಾರಿನಂಶವು ಹೆಚ್ಚು ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ.
ಇದು ಅನಗತ್ಯ ಆಹಾರ ಸೇವನೆಯನ್ನು ತಡೆಯುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಕರಿಬೇವಿನಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.