ರಾಮನಗರ :- ಮಂಜುನಾಥ್ ಬಿಟ್ಟು ಬೇರೆಯವರಿಗೆ ಮತ ಹಾಕಿದ್ರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.
ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ, ಬಿಜೆಪಿ ಅಭ್ಯರ್ಥಿ ಮಂಜುನಾಥ್ ಪರ ಬ್ಯಾಟ್ ಬೀಸಿದ್ದಾರೆ. ಮಂಜುನಾಥ್ ಪರ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ಬೇರೆಯವರಿಗೆ ಮತ ಹಾಕಿದರೆ ಸ್ವಾರ್ಥಕ್ಕೆ ಹಾಕಿದಂತೆ ಎಂದು ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಡಾ. ಸಿಎನ್ ಮಂಜುನಾಥ್ ರಾಜಕಾರಣಕ್ಕೆ ಬಂದಿದ್ದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ವೋಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತದೆ. ದೇಶದ 140 ಕೋಟಿ ಜನರಿಗೂ ಡಾ. ಮಂಜುನಾಥ್ ಸೇವೆ ಬೇಕು. ಮುಂದೆ ರಚನೆಯಾಗುವ ಕೇಂದ್ರ ಸರ್ಕಾರದಲ್ಲಿ ಮೈತ್ರಿಯಿಂದ ಸಚಿವರು ಎಂದು ಯಾರಾದರೂ ಆದರೆ ಅದು ಡಾ. ಮಂಜುನಾಥ್ ಎಂದು ಮುನಿರತ್ನ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ಸಚಿವ ಸಂಪುಟದಲ್ಲಿ ಡಾ. ಮಂಜುನಾಥ್ ಸಚಿವರಾಗುವುದು ಸತ್ಯ. ಸ್ವರ್ಗಕ್ಕೆ ಹೋಗಬೇಕೆಂಬ ಆಸೆ ಇದ್ದರೆ ಮಂಜುನಾಥ್ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು ಎಂದರು.