ಬೆಂಗಳೂರು:– ಅಕ್ರಮವಾಗಿ ಜೂಜು ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಹಲಸೂರು ರಸ್ತೆಯಲ್ಲಿರುವ ವೈಎಂಐಎ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಜೂಜು ಆಡುತ್ತಿದ್ದವರನ್ನ ವಶಕ್ಕೆ ಪಡೆದಿದ್ದಾರೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಅಂದರ್ ಬಾಹರ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ ಕ್ಲಬ್ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ.