ಯಾದಗಿರಿ: KEA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ 9 ಜನ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಹೌದು ಯಾದಗಿರಿಯಲ್ಲಿ ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿತ್ತು, ಈ ಪೈಕಿ 9 ಮಂದಿಯನ್ನು ಸಿಜೆಎಂ ನ್ಯಾಯಾಧೀಶರ ಅನುಮತಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆರೋಪಿಗಳು ಕೆಇಎ ಪರೀಕ್ಷೆಯಲ್ಲಿ ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆದಿದ್ದರು. ಕೆಇಎಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಮಾಡಿದ ಆರೋಪದ ಮೇಲೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟು 16 ಜನರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ವಶದಲ್ಲಿದ್ದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಯಾದಗಿರಿ ನಗರದ ಐದು ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ ಪರೀಕ್ಷೆಯಾಗಿದ್ದು, ಹೊರಗಿದ್ದು ಪರೀಕ್ಷೆ ಬರೆಯಲು ಸಹಾಯ ಮಾಡಿದ 7 ಜನರು ಇನ್ನು ನ್ಯಾಯಾಂಗ ಬಂಧನದಲ್ಲಿದ್ದಾರೆ..