ಬೆಂಗಳೂರು:- ಕರ್ನಾಟಕದಲ್ಲಿರುವ ಸಿದ್ದರಾಮಯ್ಯ ಸರ್ಕಾರವರು ರಾಜ್ಯದ ರೈತರಿಗೆ ಬಂಪರ್ ಸುದ್ದಿ ಕೊಟ್ಟಿದೆ.
ರೈತರ ವಿವಿಧ ಸಮಸ್ಯೆಗಳು ಸೇರಿ ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್ ಯೋಜನೆ ಮರು ಜಾರಿಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
Prahlad Joshi: ನಾಗಮಂಗಲದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ: ಕೇಂದ್ರ ಸಚಿವ ಜೋಶಿ ವಾಗ್ದಾಳಿ!
ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳಾದ ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್ ಗೆ ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.
ಈ ವೇಳೆ ಸಿದ್ದರಾಮಯ್ಯ ಅವರು ಮೇಲಿನ ಭರವಸೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಕ್ಕೆ ಬದ್ಧವಾಗಿದೆ. ವಿಧಾನ ಪರಿಷತ್ನಲ್ಲಿ ಪಕ್ಷ ಬಹುಮತ ಸಾಧಿಸಿದ ನಂತರ ತಿದ್ದುಪಡಿ ವಿಧೇಯಕ ಮಂಡಿಸಿ ಹಿಂದಿನ ಕಾಯ್ದೆ ಮರು ಸ್ಥಾಪಿಸಲಾಗುವುದು. ನೀರಾವರಿ ಪಂಪ್ಸೆಟ್ಗಳಿಗೆ ರೈತರ ಆಧಾರ್ ಸಂಖ್ಯೆ ಜೋಡಣೆ ಮಾಹಿತಿಯಿಲ್ಲ. ಈ ಬಗ್ಗೆ ವಿವರ ಪಡೆದು ಸೂಕ್ತ ಕ್ರಮವಹಿಸುವೆ ಎಂಬ ಭರವಸೆ ನೀಡಿದರು. ಇನ್ನುಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮವಹಿಸುವೆ. ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡುವೆ ಎಂದು ಸಿದ್ದರಾಮಯ್ಯ ರೈತರಿಗೆ ಭರವಸೆ ಕೊಟ್ಟಿದ್ದಾರೆ.