ನವದೆಹಲಿ:- ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ DCM ಡಿಕೆಶಿ, ಸಿಬಿಐಗೆ ಸುಪ್ರೀಂ ನೋಟಿಸ್ ಜಾರಿ ಮಾಡಿದೆ.
ದರ್ಶನ್ ಗೆ ರಾಜಾತಿಥ್ಯ ಕೇಸ್: ವಿಲ್ಸನ್ ಗಾರ್ಡನ್ ನಾಗ ಕಲಬುರಗಿ ಜೈಲಿಗೆ ಶಿಫ್ಟ್!
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಕೆಶಿ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.
ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತು.