ಬೆಂಗಳೂರು:- ಬ್ಯಾಂಕಾಕ್ನಿಂದ ಬೆಂಗಳೂರಿಗೆ ಥಾರ್ ಏರ್ ವೇಸ್ ವಿಮಾನದಲ್ಲಿ ಭಾಗಮಿಸಿದ್ದ ಇಬ್ಬರು ಪ್ರಯಾಣಿಕರ ಪ್ರಯಾಣಿಸಿದ್ದು ಅಕ್ರಮವಾಗಿ ಹ್ಯಾಂಡ್ ಬ್ಯಾಗ್ನಲ್ಲಿ ಮುಚ್ಚಿಟ್ಟು ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾರೆ. ಸದ್ಯ ಡಿಆರ್ಐ ಬೆಂಗಳೂರು ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಇಬ್ಬರನ್ನ ಬಂಧಿಸಿ 6 ಕೆಜಿ 834 ಗ್ರಾಂ ಚಿನ್ನ ಸೀಜ್ ಮಾಡಿದ್ದಾರೆ.
ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದರು. ಆ ಮೂಲಕ ದುಬೈನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದೂವರೆ ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದರು. ಅಂದಹಾಗೆ ದುಬೈ ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರು ಚಿನ್ನ ಸಾಗಾಣಿಕೆಗಾಗಿಯೆ ವಿಶೇಷವಾಗಿ ವಸ್ತ್ರಗಳನ್ನು ಮಾಡಿಸಿದ್ದರು
ಜೀನ್ಸ್ ಪ್ಯಾಂಟ್ ಟೀ ಶರ್ಟ್ಗಳಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಆರೋಪಿಗಳು ಅಕ್ರಮವಾಗಿ ಸಾಗಿಸುತ್ತಿದ್ದರು. ಕೆಂಪೇಗೌಡ ಏರ್ಪೋರ್ಟ್ಗೆ ಬಂದ ವೇಳೆ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಬಟ್ಟೆಗಳಲ್ಲಿ ಪೌಡರ್ ರೂಪದ 2 ಕೆಜಿ 814 ಗ್ರಾಂ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದರು