ಹಾಸನ: ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ. ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದರು.
ಏನಿದು ಪ್ರಕರಣ?
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್ಎಫ್ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.
Diabetes: ಶುಗರ್ ಪೇಶೆಂಟಾ.? ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ..!
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್ ಲೇವಡಿ ಮಾಡಿತ್ತು.
ಸಹೋದರನ ಬಂಧನ ಕುರಿತು ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರು ತಮ್ಮ ಮಗನನ್ನು ಎಂಪಿ ಮಾಡಲು ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ರಾಜಕೀಯವಾಗಿ ನಮ್ಮನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.