ಬಳ್ಳಾರಿ: ಅಕ್ರಮವಾಗಿ ಗಾಂಜಾ ಸೇವನೆ ಮಾಡಿ, ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಗುಲಾಬ್ ಸಾಬ್ ಮತ್ತು ಆಲಂ ಬಾಷಾ ಬಂಧಿತ ಆರೋಪಿಗಳಾಗಿದ್ದು, ಬಳ್ಳಾರಿ ನಗರದ ಮೋತಿ ಸರ್ಕಲ್ ಬಳಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆ ದಾಳಿ ಮಾಡಿ,
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 75,000 ಕ್ಕೂ ಅಧಿಕ ಬೆಲೆ ಬಾಳುವ ಗಾಂಜಾ ಜಪ್ತಿ ಮಾಡಲಾಗಿದ್ದು, ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.