ಬೆಂಗಳೂರು: ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಕರ್ನಾಟಕ ಇನ್ಫ್ರಾಸ್ಟ್ರಕ್ಚರ್ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಕುಮಾರ್ಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ
ಈ ಸಂಬಂಧ ಮೋಹನ್ ಕುಮಾರ್ ಕೋರ್ಟ್ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ