ಚಿಕ್ಕೋಡಿ: ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.
ಸರಣಿ ಅಪಘಾತ: ಲಾರಿ, 2 ಕಾರುಗಳ ನಡುವೆ ಡಿಕ್ಕಿಯಾಗಿ 4 ಎಮ್ಮೆಗಳು ಸಾವು!
ಅನಾರೋಗ್ಯದ ಸಮಸ್ಯೆಯಿಂದ ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದಳು. ಬಳಿಕ ಮತ್ತೊಂದು ಮದುವೆ ಆಗಿ ಕೇವಲ ಮೂರೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಶ್ರೀ ಶವ ಪತ್ತೆಯಾಗಿದೆ.
ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಕಂಡು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಸದ್ಯ ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಪತಿ ಬಸವರಾಜ್ ಹಂಪನ್ನವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.