ಬೆಂಗಳೂರು: ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರ ತೀರ್ಮಾನಿಸಿದೆ. ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ.
BY Vijayendra: ಸಿಎಂಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು: BY ವಿಜಯೇಂದ್ರ!
ವೇತನ ಹೆಚ್ಚಳದ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ನೌಕರರ ಸಂಬಳವನ್ನು ಶೇ.17ರಷ್ಟು ಹೆಚ್ಚಳ ಮಾಡಿದ್ದರು. ಈಗ ಏಳನೇ ವೇತನ ಆಯೋಗದ ಶಿಫಾರಸಿನಂತೆ ಇನ್ನೂ ಶೇ.10.5ರಷ್ಟು ಸೇರಿ ಒಟ್ಟು ಶೇ.27.5ರಷ್ಟು ಆಗುವಂತೆ ವೇತನವನ್ನು ಹೆಚ್ಚಿಸಲಾಗುತ್ತದೆ. ಹಾಗಾದರೆ, ಏಳನೇ ವೇತನ ಆಯೋಗದ ಜಾರಿಯಿಂದ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.