ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪತ್ನಿಯಿಂದಲೇ ಪತಿ ಬರ್ಬರ ಹತ್ಯೆಗೈದ ಪ್ರಕರಣವೊಂದು ನಡೆದಿದೆ.
ಉಮೇಶ್ ದಾಮಿ (27) ಕೊಲೆಯಾದ ಪತಿಯಾಗಿದ್ದು, ಈತನನ್ನು ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ. ಈ ಘಟನೆ ಹುಳಿಮಾವು (Hulimavu) ಸಮೀಪದ ಕಾಲೇಜಿನಲ್ಲಿ ನಡೆದಿದೆ.
ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ
ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇತ್ತ ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಹುಳಿಮಾವು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.