ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ನಟಿ ಪವಿತ್ರಾ ಗೌಡ ದೇವಸ್ಥಾನಗಳೀಗೆ ಭೇಟಿ ನೀಡುತ್ತಿದ್ದಾರೆ. ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಶಾಹಿ ಸ್ನಾನ ಮಾಡಿದ ನಟಿ ಬಳಿಕ ಕಾಶಿಗೆ ಭೇಟಿ ನೀಡಿದ್ದಾರೆ. ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು ಎಂದು ಪೋಸ್ಟ್ನಲ್ಲಿ ಪವಿತ್ರಾ ಗೌಡ ಬರೆದುಕೊಂಡಿದ್ದಾರೆ.
ನಟಿ ಪವಿತ್ರಾ ಗೌಡ ಕೂಡ ಮೌನಿ ಅಮಾವಾಸ್ಯೆ ದಿನ ಕುಂಭಮೇಳದಲ್ಲಿ ಪವಿತ್ರಾ ಸ್ನಾನ ಮಾಡಿದ ಬಗ್ಗೆ ಪೋಸ್ಟ್ ಮಾಡಿದ್ದರು. ಅದಕ್ಕೆ ಬಂದ ಕಾಮೆಂಟ್ಗಳನ್ನು ನೋಡಿ ಬೇಸರಗೊಂಡಿದ್ದಾರೆ. “ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಗೆದ್ದದ್ದು ಧರ್ಮವೇ. ಮೊದಮೊದಲು ಅಧರ್ಮಕ್ಕೆ ಜಯ ಸಿಕ್ಕಿರಬೋಹುದು ಆದರೆ ಕೊನೆಗೆ ಗೆಲುವಾಗುವುದು ಧರ್ಮಕ್ಕೆ. ಎಲ್ಲಾ ಗೌರವಾನ್ವಿತ ಸುದ್ದಿ ವಾಹಿನಿಗಳಿಗೂ ಹಾಗೂ ಸಾಮಾಜಿಕ ಜಾಲತಾಣಗಳಿಗೂ ನನ್ನ ವಂದನೆಗಳು. ಕೆಲವು ಮಾಧ್ಯಮದವರ ಅಮಾನವೀಯ ಮಾತುಗಳು ಹಾಗೂ ಕೆಲ ವಿಕೃತ ಮನಸ್ಕರ ಕಾಮೆಂಟ್ಸ್ ಬೇಸರ ತಂದಿದೆ. ಕಾಲಾಯ ತಸ್ಮಯ್ ನಮಃ” ಎಂದು ಬರೆದುಕೊಂಡಿದ್ದಾರೆ.
ಸದ್ಯ ಪವಿತ್ರಾ ಗೌಡ ಕಾಶಿಗೆ ತೆರಳಿ ವಿಶ್ವನಾಥನ ದರ್ಶನ ಪಡೆದಿದ್ದಾರೆ. ಅದರ ಫೋಟೊವನ್ನು ಸಹ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನದ ಬಳಿಕ “ಮೌನಿ ಅಮಾವಾಸ್ಯಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೆ ಧನ್ಯಳು. ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತನಾಗಿದ್ದೇನೆ ಎಂದು ನಾನು ಭಾವಿಸುತ್ತೇನೆ. ಹರ ಹರ ಮಹಾದೇವ” ಎಂದು ಬರೆದುಕೊಂಡಿದ್ದರು.